Breaking News

ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ವಿಜಯೇಂದ್ರ

Spread the love

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು.

ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಐವತ್ತಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆ ಅಗಿದೆ. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಅಲ್ಲ, ಕಾಂಗ್ರೆಸ್ ಮುಖ್ಯಮಂತ್ರಿ. ಇಂಥಹ ಹಿಂದೂ ವಿರೋಧಿ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರು ಖಂಡಿತಾ ಕಿತ್ತು ಹಾಕುತ್ತಾರೆ‌ ಎಂದರು.

ಕರ್ನಾಟಕದಲ್ಲಿ ಜನವಿರೋಧಿ ಮತ್ತು ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರವಿದೆ.‌ ರಾಜ್ಯದ ಮುಖ್ಯಮಂತ್ರಿಯಾದ ಮೇಲೆ ಎಷ್ಟು ಬಾರಿ ಮಂಗಳೂರಿಗೆ ಭೇಟಿ ಕೊಟ್ರು, ಎಷ್ಟು ಅನುದಾನ ಕೊಟ್ರು?. ಯಡಿಯೂರಪ್ಪ ಸಿಎಂ ಆಗಿದ್ದಾಗ ದ.ಕ ಜಿಲ್ಲೆಗೆ 19,500 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ದ.ಕ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿ ಇಲ್ಲವೇ? ಸ್ಪೀಕರ್ ಒಬ್ಬರು ಇದ್ದಾರೆ, ನಮ್ಮ ಶಾಸಕರು ಪ್ರತಿಭಟನೆ ಮಾಡಿದರೆ ಅಮಾನತು ಮಾಡ್ತಾರೆ. ಕಾನೂನು‌ಬಾಹಿರವಾಗಿ ನಮ್ಮನ್ನು ಹೊರಗಡೆ ಓಡಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ