Breaking News

ಪ್ರೀತಿಸುತ್ತಿದ್ದ ಬಾಲಕಿಗೆ ಸಾರಾಯಿ ಕುಡಿಸಿ ಅತ್ಯಾಚಾರ

Spread the love

ಬೆಳಗಾವಿ: ಪ್ರೀತಿಸುತ್ತಿದ್ದ ಬಾಲಕಿಗೆ ತಾನೇ ಸಾರಾಯಿ ಕುಡಿಸಿ ಆಕೆಯ ಮೇಲೆ ಯುವಕಯೋರ್ವ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಬೇಕಿದೆ ಎಂದು ತಿಳಿಸಿದ್ದಾರೆ.

ಆ ಪ್ರಮುಖ ಆರೋಪಿ ಅಪ್ರಾಪ್ತೆ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತಿದ್ದ. ಅಲ್ಲದೆ ಪದೇ ಪದೆ ಆಕೆಯ ಮನೆಗೆ ಹೋಗಿ ಮದುವೆ ಮಾಡಿಕೊಡಿ ಎಂದು ಪೋಷಕರನ್ನು ಪೀಡಿಸುತ್ತಿದ್ದ ಎಂದು ವರದಿಯಾಗಿದೆ.

ಮೂರು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತನ ಸ್ನೇಹಿತನ ಸಹಾಯ ಪಡೆದು ಬಾಲಕಿ ವಾಸವಿದ್ದ ಮನೆಗೆ ಬಂದು ಆಕೆಗೆ ಸಾರಾಯಿ ಕುಡಿಸಿ ಅತ್ಯಾಚಾರ ಎಸಗಿರುವುದಾಗಿ ಪೋಷಕರು ದೂರು ದಾಖಲಿಸಿದ್ದಾರೆ.

ಆರೋಪಿಗೆ ಸಹಾಯ ಮಾಡಿದ್ದ ಸ್ನೇಹಿತನನ್ನು ಬಂಧಿಸಿದ್ದು, ಪ್ರಮುಖ ಆರೋಪಿಯನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ