Breaking News
Home / Uncategorized / ಉಪವಾಸ ಸತ್ಯಾಗ್ರಹ ಆರಂಭಿಸಿ ಸಾರಿಗೆ ನೌಕರರು..!

ಉಪವಾಸ ಸತ್ಯಾಗ್ರಹ ಆರಂಭಿಸಿ ಸಾರಿಗೆ ನೌಕರರು..!

Spread the love

ಬೆಂಗಳೂರು, ಡಿ.13- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಇತ್ತ ಸರ್ಕಾರ ಮುಷ್ಕರ ನಿರತರ ಮನವೊಲಿಕೆಯ ಪ್ರಯತ್ನ ಮುಂದುವರೆಸಿದ್ದು , ಕಾರ್ಯ ಸಾಧು ಬೇಡಿಕೆಗಳ ಈಡೇರಿಕೆಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ.

ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಾರಿಗೆ ನಿಗಮಗಳ ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸುವ ಯತ್ನ ಮುಂದುವರೆಸಿದೆ.

ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗಳೆಲ್ಲಾ ನಮ್ಮ ಮನೆಯವರು ಇದ್ದ ಹಾಗೆ. ನಮ್ಮ ಆರ್ಥಿಕ ಇತಿಮಿತಿಯೊಳಗೆ ಅವರ ಬೇಡಿಕೆಗಳ ಈಡೇರಿಕೆಯ ಪ್ರಯತ್ನ ನಡೆಸುತ್ತೇವೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ. ಸಾರಿಗೆ ನಿಗಮದವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿದರೆ ಎಲ್ಲಾ ನಿಗಮದವರು ಕೇಳುತ್ತಾರೆ.

ಕೋವಿಡ್ ಸಂಕಷ್ಟದ ಸಮಯದಲ್ಲೂ ಎಲ್ಲಾ ನೌಕರರಿಗೂ ವೇತನ ನೀಡಲಾಗಿದೆ. ಎಲ್ಲಾ ನಿಗಮಗಳ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇವೆ. ಮುಷ್ಕರ ನಿರತರ ಮನವೊಲಿಸುತ್ತೇವೆ. ಇಂದು ಸಂಜೆಯೊಳಗೆ ಮುಷ್ಕರ ಹಿಂದಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವರೂ ಆದ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಮುಷ್ಕರ ನಿರತ ನೌಕರರ ಮನವೊಲಿಕೆ ಪ್ರಯತ್ನ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಹೋರಾಟದ ಹಾದಿ ಹಿಡಿದಿದ್ದ ಸಾರಿಗೆ ನೌಕರರು ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಇಂದು ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರು ಮಕ್ಕಳೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿದ್ದಾರೆ.

ಬಸ್ ನಿಲ್ದಾಣ , ಡಿಪೋಗಳಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿರುವ ಹಿನ್ನೆಲೆಯಲ್ಲಿ ನಗರದ ಫ್ರೀಡಂಪಾರ್ಕ್ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳ ಜಿಲ್ಲಾಕಾರಿಗಳ ಕಚೇರಿ ಎದುರು ಗಾಂ ಭಾವಚಿತ್ರ ಹಾಕಿಕೊಂಡು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಮೈಸೂರಿನ ಜಿಲ್ಲಾಕಾರಿ ಕಚೇರಿ ಬಳಿ ಸಮಾವೇಶಗೊಂಡ ಸಾರಿಗೆ ಸಿಬ್ಬಂದಿ ಧರಣಿ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅತ್ತ ಬೆಳಗಾವಿ , ವಿಜಯಪುರ, ರಾಯಚೂರು, ಶಿವಮೊಗ್ಗ , ಧಾರವಾಡ, ಹುಬ್ಬಳ್ಳಿ, ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರ ಮುಂದುವರೆದ ಭಾಗವಾಗಿ ಉಪವಾಸ ಸತ್ಯಾಗ್ರಹ ನಡೆಸಿದರು.

# ವ್ಯಾಪಾರ ವಹಿವಾಟು ಕುಂಠಿತ:
ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಪರಿಣಾಮ ಬಸ್‍ಗಳ ಸಂಚಾರ ಬಂದ್ ಆಗಿದ್ದು , ಬೆಂಗಳೂರಿನ ಮೆಜೆಸ್ಟಿಕ್ ಸುತ್ತಮುತ್ತ ವ್ಯಾಪಾರ ವಹಿವಾಟು ಸಂಪೂರ್ಣ ಕುಂಠಿತವಾಗಿದೆ.
ಅಷ್ಟೇ ಅಲ್ಲ ಬಹುತೇಕ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಕೂಡ ಮುಷ್ಕರದ ಪರಿಣಾಮ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ.

# ಲಕ್ಷ ದೀಪೋತ್ಸವಕ್ಕೆ ಎಫೆಕ್ಟ್:
ಧರ್ಮಸ್ಥಳದಲ್ಲಿ ನಡೆಯಲಿರುವ ಲಕ್ಷ ದೀಪೋತ್ಸವಕ್ಕೆ ಸಾರಿಗೆ ನೌಕರರ ಮುಷ್ಕರ ಪರಿಣಾಮ ಬೀರಿದೆ. ರಾಜ್ಯಾದ್ಯಂತ ಬಸ್ ಮುಷ್ಕರದಿಂದ ಲಕ್ಷ ದೀಪೋತ್ಸವಕ್ಕೆ ತೆರಳುವವರಿಗೆ ತೀವ್ರ ಅಡಚಣೆಯಾಗಿದೆ.ಅದೇ ರೀತಿ ಕಡೆ ಕಾರ್ತೀಕ ಸೋಮವಾರದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ, ನಂಜನಗೂಡು, ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ಪ್ರಸಿದ್ಧ ದೇಗುಲಗಳಲ್ಲಿ ನಡೆಯಲಿರುವ ಲಕ್ಷ ದೀಪೋತ್ಸವದ ಮೇಲೂ ಕಾರ್ಯಕ್ರಮದ ಎಫೆಕ್ಟ್ ತಟ್ಟಿದೆ


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ