Home / ಜಿಲ್ಲೆ / ಬೆಂಗಳೂರು / ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಎಂಟಿಸಿಯಿಂದ ಬಿಗ್ ಶಾಕ್..!

ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಎಂಟಿಸಿಯಿಂದ ಬಿಗ್ ಶಾಕ್..!

Spread the love

ಬೆಂಗಳೂರು, ಡಿ.13- ಮುಷ್ಕರ ನಿರತ ಸಾರಿಗೆ ನೌಕರರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಶಾಕ್ ನೀಡಿದ್ದು, ಕೆಲಸಕ್ಕೆ ಗೈರಾಗಿರುವ ನೌಕರರಿಗೆ ವೇತನ ಕಡಿತಗೊಳಿಸಿದೆ.

ಜೊತೆಗೆ ಅಗತ್ಯ ಸೇವೆ ಮತ್ತು ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ ಆದೇಶದ ಅನ್ವಯ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿದೆ. ಬಿಎಂಟಿಸಿ ಸುತ್ತೋಲೆಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದು, ಗೈರಾಗುವ ನೌಕರರಿಗೆ ವೇತನ ಕಡಿತ ಹಾಗೂ ಹೊಸದಾಗಿ ಯಾವುದೇ ರಜೆ ಮಂಜೂರು ಮಾಡಬಾರದು.ಮುಷ್ಕರಕ್ಕೆ ಮುನ್ನ ರಜೆ ತೆಗೆದುಕೊಂಡವರಿಗೆ ಈ ಕ್ರಮ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಬಿಎಂಟಿಸಿ ಜಾಗೃತ ಹಾಗೂ ಭದ್ರತಾ ವಿಭಾಗದಿಂದ ಈ ಆದೇಶ ಹೊರಡಿಸಲಾಗಿದೆ.ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸರ್ಕಾರಿ ಸವಲತ್ತುಗಳನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಸಿಬ್ಬಂದಿ ಸರ್ಕಾರದ ಮುಂದಿಟ್ಟಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ವಿಧಾನಸೌಧ ಚಲೋ ಹಾಗೂ ಅರೆಬೆತ್ತಲೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ.

ಈ ಹಿನ್ನೆಲೆಯಲ್ಲಿ ಉದ್ದೇಶಿತ ವಿಧಾನಸೌಧ ಚಲೋ ಜನಸಾಮಾನ್ಯರಿಗೆ ಒದಗಿಸಬೇಕಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಸಲುವಾಗಿ ಕೆಲವು ಸೂಚನೆಗಳೊಂದಿಗೆ ವಿಧಾನಸೌಧ ಚಲೋ ಹಮ್ಮಿಕೊಂಡ ದಿನ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ) ಮತ್ತು ಇತರ ಸಂಘಟನೆಗಳು ಜೊತೆಗೂಡಿ ನಡೆದ ವಿಧಾನಸೌಧ ಚಲೋ ನಂತರದಲ್ಲಿ ಸಹ ಮುಂಚಿತವಾಗಿ ಯಾವುದೇ ರೀತಿಯ ಮುಷ್ಕರದ ನೋಟಿಸ್ ನೀಡದೆ ಅರ್ನಿಷ್ಟಾವ ಮುಷ್ಕರ ಹೂಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದೆ.

ಈ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ರಜೆ ಬೇಕಿದ್ದರೆ ಅಂತಹವರು ಜಾಗೃತ ಹಾಗೂ ಭದ್ರತಾ ವಿಭಾಗ ನಿರ್ದೇಶಕರ ಅನುಮತಿ ಪಡೆಯಬೇಕು. ಅವರ ಅನುಮತಿ ಇಲ್ಲದೇ ರಜೆ ನೀಡಬಾರದು ಎಂದು ಸೂಚಿಸಲಾಗಿದೆ. ಕರ್ತವ್ಯಕ್ಕೆ ಗೈರಾಗುವ ನೌಕರರಿಗೆ ವೇತನವಿಲ್ಲ. ಕಡಿತ ಮಾಡಲಾಗುತ್ತದೆ. ಇನ್ನು ಈ ಸೂಚನೆಗಳು ವಾರದ ರಜೆ ಮತ್ತು ದೀರ್ಘಾವ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ