Breaking News

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ :ಅಶೋಕ್ ಆಗ್ರಹ

Spread the love

ಬೆಂಗಳೂರು, ಏಪ್ರಿಲ್ 13: ಕೇವಲ ಮುಸ್ಲಿಮರನ್ನು (Muslim) ವೋಟ್ ಬ್ಯಾಂಕ್ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್​ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಪಕ್ಷ, ಜಾತಿ, ಧರ್ಮ ಒಡೆಯುವುದರಲ್ಲಿ ನಂ.1 ಆಗಿದ್ದಾರೆ. ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ