Breaking News

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ

Spread the love

ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶೀ ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ.

ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
89 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್​ ಪೂರ್ಣಗೊಂಡಿದೆ.

ಹೊಸ ರೈಲು ನಿಲ್ದಾಣ ನಿರ್ಮಾಣದ ಬಳಿಕ, ಭಾರತ ಸರ್ಕಾರದಿಂದ ತುಮಕೂರು ರೈಲು ನಿಲ್ದಾಣಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು ಎಂದು ಹೇಳಿದರು. ಇನ್ನು, ತುಮಕೂರು ರೈಲು ನಿಲ್ದಾಣಕ್ಕೆ ಶೀಗ್ರಳ ಹೆಸರು ಮರುನಾಮಕರಣ ರಾಜ್ಯ ಸರ್ಕಾರ ಕೂಡ ಒಪ್ಪಿಕೊಂಡಿದ್ದು, ಭಾರತ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ