ಹುಬ್ಬಳ್ಳಿ: ಇಲ್ಲಿನ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ಬಿಹಾರದ ರಕ್ಷಿತ್ ಕ್ರಾಂತಿ ಸಾವನ್ನಪ್ಪಿದ ಆರೋಪಿ ಎಂದು ಗುರುತಿಸಲಾಗಿದೆ.
ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ಹಲ್ಲೆಗೆ ಮುಂದಾಗಿದ್ದರಿಂದ ಗುಂಡು ಹಾರಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ, ಘಟನೆ ಖಂಡಿಸಿ ಸ್ಥಳೀಯರು ಅಶೋಕನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
Laxmi News 24×7