ದಾವಣಗೆರೆ : ಆರು ಜನ ಆರೋಪಿಗಳು ಮಹಿಳೆಯೋರ್ವರಿಗೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ (ಏ.09) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಮಾಜವೇ ತಲೆ ತಗ್ಗಿಸುವ ಘಟನೆ ನಡೆಯುತ್ತಿದ್ದರೂ ಅಲ್ಲಿ ನೆರೆದಿದ್ದವರು ಅದನ್ನು ತಡೆಯಲು ಮುಂದಾಗದೇ ಗುಂಪು ಗುಂಪಿನಲ್ಲಿ ನಿಂತು ವೀಕ್ಷಿಸಿದ್ದಾರೆ ಎಂದು ವರದಿಯಾಗಿದೆ.
ಮಹಿಳೆಗೆ ಥಳಿಸಿದ ಮೊಹಮ್ಮದ್ ನಯಾಜ್ (32), ಮೊಹಮ್ಮದ್ ಗೌಸ್ ಪೀರ್ (45), ಚಾಂದ್ ಪೀರ್(35), ಇನಾಯಿತ್ ಉಲ್ಲಾ(51), ದಸ್ತಗೀರ್(24) ಹಾಗೂ ರಸೂಲ್ ಟಿಆರ್ (42) ಎಂಬ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆ ಮಾಡಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದರು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಘಟನೆಯ ಬಗ್ಗೆ ಪಿಐ ರವೀಶ್ ಅವರು ಈಟಿವಿ ಭಾರತದೊಂದಿಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿ, “ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆಯ ಪಂಚಾಯಿತಿ ಮಾಡಲು ಮಸೀದಿಗೆ ಕರೆಸಲಾಗಿತ್ತು. ಆಗ ಆ ಮಹಿಳೆ ಅಧಿಕ ಪ್ರಸಂಗತನದಿಂದ ಮಾತನಾಡಿದ್ದಕ್ಕಾಗಿ ಕಮಿಟಿಯ ಕೆಲವರು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಇದರ ಸಂಬಂಧ ಆರು ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದಾರೆ.
Laxmi News 24×7