Home / ಜಿಲ್ಲೆ / ಬೆಂಗಳೂರು / ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ

ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ

Spread the love

ಬೆಂಗಳೂರು, ಡಿ.13- ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇ ಬುಧವಾರದಿಂದ ಮತ್ತೊಂದು ಪ್ರತಿಭಟನೆಗೆ ಕರುನಾಡು ಸಾಕ್ಷಿಯಾಗಲಿದೆ.ಕೊರೊನಾದಿಂದ ಕಂಗೆಟ್ಟಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಡಿ.16ರಂದು ಸಾವಿರಾರು ಖಾಸಗಿ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಹೋರಾಟ ನಡೆಸಲಿದ್ದಾರೆ. ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ದ್ವಂದ್ವ ನಿಲುವನ್ನು ವಿರೋಸಿ ಅನಿವಾರ್ಯವಾಗಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ

ರಾಜ್ಯದಲ್ಲಿ ಕೊರೊನಾ ಸಂಕಷ್ಟದ ಅವಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕೂಲಿ ಕಾರ್ಮಿಕರು, ಸೇರಿದಂತೆ ಹಲವರಿಗೆ ಸರ್ಕಾರ ಪರಿಹಾರ ನೀಡಿದೆ . ಸರ್ಕಾರ ನಿಗಮ ಮತ್ತು ಪ್ರಾಕಾರಗಳನ್ನು ರಚಿಸುವ ಜೊತೆಗೆ ಸಾವಿರಾರು ಕೋಟಿ ರೂ.ಗಳನ್ನು ಅನುದಾನವನ್ನು ನೀಡುತ್ತಿದೆ.

ಸಮಾಜವನ್ನು ನಿರ್ಮಿಸಲು ಪ್ರಮುಖ ಪಾತ್ರವಹಿಸುವ ಖಾಸಗಿ ಶಾಲೆಗಳ ಶಿಕ್ಷಕರ ಹಿತವನ್ನು ಸರ್ಕಾರ ಕಡೆಗಣಿಸಿದೆ . ಖಾಸಗಿ ಶಾಲೆಗಳಿಗೆ ಯಾವುದೇ ವಿಶೇಷ ಅನುದಾನವನ್ನೂ ನೀಡಿಲ್ಲ ಎಂಬುದು ಶಿಕ್ಷಕರ ಅಳಲು. ಈ ಕುರಿತು ಅಕೃತ ಹೇಳಿಕೆ ಬಿಡುಗಡೆ ಮಾಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕ್ಯಾಮ್ಸï ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಡಿ.16 ರಂದು ರಾಜ್ಯದಲ್ಲಿ ಖಾಸಗಿ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಲಿವೆ.

ನಮ್ಮ ನಡೆ ಶಿಕ್ಷಕರ ಕಡೆ, ಶಿಕ್ಷಣ ಸಂಸ್ಥೆ, ಶಿಕ್ಷಕರು ಉಳಿದರೆ ಶಿಕ್ಷಣ ಉದ್ದೇಶದೊಂದಿಗೆ ನಡೆಸುತ್ತಿರುವ ಇದು ಸಾಂಕೇತಿಕ ಹೋರಾಟ. ಆದರೆ ಕೊರೊನಾ ಕಷ್ಟ ಕಾಲದಲ್ಲಿ ಖಾಸಗಿ ಶಿಕ್ಷಕರನ್ನು ನಿರ್ಲಕ್ಷಿಸಿದೆ. ಹೀಗಾಗಿ ನಾನಾ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ಆಯಾ ಜಿಲ್ಲೆಳಲ್ಲಿ ಹೋರಾಟ ನಡೆಯಲಿದೆ. ಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ