Breaking News

5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

Spread the love

ಬೆಂಗಳೂರು, ಏಪ್ರಿಲ್ 15: ಸಿಸಿಬಿ (CCB) ಮಾದಕವಸ್ತು ನಿಗ್ರಹದಳ ಬೆಂಗಳೂರಿನಲ್ಲಿ (Bengaluru) ನಡೆಸಿದ ಕಾರ್ಯಾಚರಣೆಯಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ (Drugs) ಜಪ್ತಿ ಮಾಡಲಾಗಿದೆ.

ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಂದು ಪ್ರಕರಣದಲ್ಲಿ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು,

ಬಂಧಿತನ ಬಳಿಯಿದ್ದ 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಈಗಲ್ ಟನ್ ರೆಸಾರ್ಟ್​​ನಲ್ಲಿ ಅರೆಸ್ಟ್ ಆಗಿದ್ದ ಪೆಡ್ಲರ್​​ನಿಂದಲೇ ಮತ್ತೆ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ನಗರದ ಹಲವು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲು ಡ್ರಗ್ಸ್ ಸಾಗಾಟ ಮಾಡಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ