Breaking News

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ

Spread the love

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ.

5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು.

ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ