Breaking News

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.

Spread the love

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.

ಈ ಸಭೆಯ ಮುಖ್ಯಾಂಶಗಳು:

* ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ.

* ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು.

* ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.

* ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ