Breaking News

ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ,

Spread the love

ಬೆಂಗಳೂರು, ಏಪ್ರಿಲ್​ 16: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಪರೀಕ್ಷೆ-1ರ ಫಲಿತಾಂಶವನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆ? ವೈಬ್​ಸೈಟ್​ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್ಇಎಬಿ ಮೇ 9 ರಂದು ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.

ಫಲಿತಾಂಶವನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ