Breaking News

ಮಳೆಗಾಲದಲ್ಲಿ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ

Spread the love

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ವು ಯಾವಾಗಲೂ ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್‌ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರ ವಹಿಸಲು ಕ್ರಮ ವಹಿಸಿದೆ ಎಂದು ಸೆಸ್ಕ್‌ ಪ್ರಕಟಣೆ ಮೂಲಕ ತಿಳಿಸಿದೆ.

ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಈಗಾಗಲೇ ಆರಂಭವಾಗಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಮಳೆಯಿಂದ ಸಂಭವಿಸಬಹುದಾದ ವಿದ್ಯುತ್‌ ಅವಘಡಗಳು ಹಾಗೂ ತೊಂದರೆಗಳನ್ನು ಎದುರಿಸಲು ಸೆಸ್ಕ್ ಸನ್ನದ್ಧವಾಗಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯ ಸಂದರ್ಭದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸೆಸ್ಕ್‌ ತಯಾರಿದೆ. ಗ್ರಾಹಕರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರಿಗೆ ಅಗತ್ಯವಾದ ಸೇವೆ ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ. ಅದರಂತೆ ಸಾರ್ವಜನಿಕರು ಅತಿಯಾದ ಗಾಳಿ ಮತ್ತು ಮಳೆಯ ವೇಳೆ ವಿದ್ಯುತ್ ಅಪಾಯ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಲು ಕೋರಲಾಗಿದೆ.

ಅಲ್ಲದೇ ತಮ್ಮ ಸುತ್ತಮುಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ತಂತಿಗಳು ತುಂಡಾಗಿರುವುದು, ವಿದ್ಯುತ್‌ ಕಂಬಗಳು ಹಾನಿಯಾಗಿರುವುದು ಅಥವಾ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ತುರ್ತಾಗಿ 24*7 ಸಹಾಯವಾಣಿ 1912 ಅಥವಾ ನಿಗಮದ ವಾಟ್ಸಾಪ್‌ ಸಂಖ್ಯೆ 9448991912 ಸಂಖ್ಯೆಗೆ ಫೋಟೋ ಸಹಿತವಾಗಿ ಮಾಹಿತಿ ನೀಡುವಂತೆ ಅಥವಾ ಸ್ಥಳೀಯ ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ ಎಂ ಮುನಿಗೋಪಾಲ್‌ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ