Home / ಜಿಲ್ಲೆ / ಬೆಳಗಾವಿ / ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನುಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ

ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನುಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ

Spread the love

ಬೆಂಗಳೂರು,ಡಿ.14- ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವೇ ಇಲ್ಲ. ಉಳಿದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಸಿದ್ದವಿದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದ ಕಾರಣ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನೌಕರರು 10 ಬೇಡಿಕೆಗಳನ್ನು ಮುಂದಿಟ್ಟಿದ್ದರು. ಅದರಲ್ಲಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.

ಸರ್ಕಾರಿ ನೌಕರರನ್ನಾಗಿ ಮಾಡುವುದರಿಂದ ಸರ್ಕಾರಕ್ಕೆ ಬಹಳಷ್ಟು ಹಣಕಾಸಿನ ಸಮಸ್ಯೆ ಎದುರಾಗುತ್ತದೆ. ಇಲಾಖೆಯಲ್ಲಿ 40 ನಿಗಮಗಳಿವೆ. ಇದರಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ