Breaking News

30 ವರ್ಷ ಸೇವೆ ಸಲ್ಲಿಸಿದ ಅರಣ್ಯ ವೀಕ್ಷಕನ ಸೇವೆ ಖಾಯಂಗೊಳಿಸಲು ಆದೇಶಿಸಿದ ಹೈಕೋರ್ಟ್

Spread the love

ಬೆಂಗಳೂರು : ದಿನಗೂಲಿ ಆಧಾರದಲ್ಲಿ ಬರೋಬ್ಬರಿ 30 ವರ್ಷಗಳ ಕಾಲ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನೋರ್ವನ ಸೇವೆ ಖಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್​ ಆದೇಶಿಸಿದೆ. ಅಲ್ಲದೆ, ಮಂಜೂರಾತಿ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿಯ ಸೇವೆ ಖಾಯಮಾತಿಗೆ ಅರ್ಹನಾಗುತ್ತಾನೆ ಎಂದು ಮತ್ತೊಮ್ಮೆ ಪೀಠ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ.

ತಮ್ಮ ಸೇವೆ ಖಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹವನ್ನು ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದು ಪಡಿಸುವಂತೆ ಕೋರಿ ಆನೇಕಲ್‌ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್‌ ವಾಚರ್‌) ಪಿ. ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್‌ ಅವರ ಪೀಠ ಈ ಆದೇಶ ಮಾಡಿದೆ.

ದಿನಗೂಲಿ ನೌಕರನಾಗಿರುವ ಜುಂಜಪ್ಪ ಅವರು ಖಾಯಂ ಉದ್ಯೋಗಿಗೆ ಸರಿ ಸಮಾನವಾಗಿ 30 ವರ್ಷ ನಿರಂತರವಾಗಿ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಅರಣ್ಯ ಇಲಾಖೆ ಆತನ ಸೇವೆ ಖಾಯಂಗೊಳಿಸುವುದಕ್ಕೆ ನಿರಾಕರಿಸಿರುವ ಜೊತೆಗೆ 30 ವರ್ಷ ನಿರಂತರವಾಗಿ ಆತ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿಲ್ಲ.

ಜುಂಜಪ್ಪ ಅವರ ವೇತನ, ಸೇವಾ ದಾಖಲೆಗಳು ಮತ್ತು ಅರಣ್ಯ ಇಲಾಖೆಯ ಅಧಿಕೃತ ಪತ್ರ ವ್ಯವಹಾರಗಳನ್ನು ಮೌಲ್ಯಮಾಪನ ಮಾಡುವಲ್ಲಿ ಕೆಎಟಿ ವಿಫಲವಾಗಿದೆ. ಔಪಚಾರಿಕ ನೇಮಕ ಪತ್ರವನ್ನು ಹಾಜರುಪಡಿಸಿಲ್ಲ ಎಂಬ ಏಕೈಕ ಅಂಶವು ನಿರಂತರವಾಗಿ ಸೇವೆ ಸಲ್ಲಿಸಿರುವ ಉದ್ಯೋಗಿಯ ಸೇವಾ ಖಾಯಂಮಾತಿಯ ಕಾನೂನುಬದ್ಧ ಹಕ್ಕನ್ನು ನಿರಾಕರಿಸುವುದಕ್ಕೆ ಆಧಾರವಾಗುವುದಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದ್ದು, ಜುಂಜಪ್ಪ ಅವರನ್ನು ಸೇವೆಗೆ ಖಾಯಂಗೊಳಿಸುವಂತೆ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ನಿರ್ದೇಶಿಸಿದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ