Breaking News

CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು: ಆಕ್ರೋಶ

Spread the love

ಶಿವಮೊಗ್ಗಏಪ್ರಿಲ್​ 17: ಸಿಇಟಿ ಪರೀಕ್ಷೆ (CET Examಬರೆಯಲು ಬಂದ ಬ್ರಾಹ್ಮಣ (Brahmin) ವಿದ್ಯಾರ್ಥಿಗಳ (Students) ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ

ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ.

ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ದೂರು ನೀಡಿದೆ.


Spread the love

About Laxminews 24x7

Check Also

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

Spread the love ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ