ಮೈಸೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.
ನಗರದ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆ ಮುಂದೆ ಘಂಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಜನಿವಾರ ಧರಿಸುವುದು ನಮ್ಮ ಸಂಪ್ರದಾಯ. ನಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಖಂಡನೀಯ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
Laxmi News 24×7