Breaking News

ಬಪ್ಪನಾಡು ವಾರ್ಷಿಕ ಜಾತ್ರೆ ವೇಳೆ ಮುರಿದು ಬಿದ್ದ ರಥ

Spread the love

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವೇಳೆ, ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಹಾಗೂ ಅರ್ಚಕರು ರಥದಲ್ಲೇ ಇದ್ದರು. ಆದರೆ, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ದೇವಿಯನ್ನು ಚಂದ್ರಮಂಡಲ ರಥದಲ್ಲಿ ಕೂರಿಸಿ ಉತ್ಸವ ಮುಂದುವರಿಸಿ, ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಉತ್ಸವ ಸಂದರ್ಭದಲ್ಲೇ ಬ್ರಹ್ಮರಥ ಮುರಿದು ಬಿದ್ದಿರುವುದು ಭಕ್ತರ ಮತ್ತು ಕ್ಷೇತ್ರದವರ ಆತಂಕ ಮತ್ತು ಕಳವಳಕ್ಕೆ ಕಾರಣವಾಗಿದೆ. ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಶಯನೋತ್ಸವ ಬಹಳ ಪ್ರಸಿದ್ಧವಾಗಿದೆ. ದೇವಿ ಮಲ್ಲಿಗೆ ಹೂಗಳ ಮೇಲೆ ಪವಡಿಸುತ್ತಾರೆ ಎಂಬ ನಂಬಿಕೆಯಿದೆ.ಶುಕ್ರವಾರ ರಾತ್ರಿ ನೆರವೇರಿದ ಶಯನೋತ್ಸವಕ್ಕೆ ಭಕ್ತರು 1.5 ಲಕ್ಷಕ್ಕೂ ಅಧಿಕ ಅಟ್ಟೆ ಮಲ್ಲಿಗೆ ಹೂಗಳನ್ನು ಅರ್ಪಿಸಿದ್ದರು


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ