ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ
: ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.
ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸುದ ಹಿಂದೂ ಕಾರ್ಯಕರ್ತರು, ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ವಿರುದ್ಧ ಸೇರಿ ರಾಜ್ಯ ಸರ್ಕಾತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ಶಿಕ್ಷಣ ಸಂಸ್ಥೆಯವರು ತೆಗೆಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಈ ಕೂಡಲೇ ಜನಿವಾರ ತೆಗೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದೇವೇಳೆ ಪ್ರತಿಭಟನಾ ವೇದಿಕೆಯಲ್ಲಿ ಮಾತಾಡಿದ ಬಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ, ಹಿಂದೂ ಸಂಕೇತವಾದ ಜನಿವಾರನ್ನು ತೆಗೆಯಲು ಕಾರಣ ಏನು?, ಅದೇನು ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?,
ಇಷ್ಟೆಲ್ಲ ಆಗಲು ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ. ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಜನಿವಾರ ತೆಗೆಯಿಸಿದ ಶಿಕ್ಷಣ ಸಂಸ್ಥೆ ಹಾಗೂ ಅಧಿಕಾರಿಗಳ ಮೇಲೆ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು ಒತ್ತಾಯಿಸಿದರು. ಇಲ್ಲವಾದಲ್ಲಿ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದರು.