Breaking News

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*

Spread the love

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*
: ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ.
ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ.
ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, ತಿಡಗುಂದಿ ಶಾಖಾ ಕಾಲುವೆ ಮೂಲಕ ಕೆರೆಗೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ನೀಡಿದ್ದಾರೆ..

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ