Breaking News

ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ

Spread the love

ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಹತ್ಯೆ ಮಾಡಲಾಗಿದ್ದು , ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& ಐಜಿಪಿಯಾಗಿದ್ದರು.
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ಜಾನ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.
ಹಿರಿಯ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು 2015ರ ಮಾರ್ಚ್ 01 (ಶನಿವಾರ) ದಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದರು. 1981 ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಓಂ ಪ್ರಕಾಶ್ ಬಿಹಾರದ ಚಂಪಾರಣ್ ಜಿಲ್ಲೆಯವರು. ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ನಂತರ, ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್ಪಿಯಾಗಿ ಬಡ್ತಿ ಪಡೆದ್ದರು. ಅಲ್ಲದೇ ಬೆಳಗಾವಿಯಲ್ಲಿಯೂ ಅವರು ಸೇವೆಯನ್ನು ಸಲ್ಲಿಸಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ