Breaking News

ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the love

ಧಾರವಾಡ, ಏಪ್ರಿಲ್​ 23: ಮನೆ ಹೊಕ್ಕು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (RSS) ಮುಖಂಡನಿಗೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಧಾರವಾಡ (Dharwad) ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ನಡೆದಿದೆ.

ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ.

ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ.ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ