Breaking News

ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

Spread the love

ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose)​ ಏಕಾಏಕಿ ಬೈಕ್ ಸವಾರ ವಿಕಾಸ್​​ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಜೊತೆಗೆ ದೂರುದಾರ ವಿಕಾಸ್ ಕುಮಾರ್​ಗೂ ನೋಟಿಸ್ ಜಾರಿಗೆ ಆದೇಶಿಸಿದೆ.

ಶಿಲಾದಿತ್ಯ ಬೋಸ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ವಿಕಾಸ್ ಹಲ್ಲೆಯಿಂದ ಶಿಲಾದಿತ್ಯ ಬೋಸ್​ಗೆ ಗಂಭೀರ ಗಾಯವಾಗಿದೆ. ವಿಕಾಸ್​ಗೆ ಸಣ್ಣ ಗಾಯವೆಂದು ಎಫ್ಐಆರ್​ನಲ್ಲೇ ಉಲ್ಲೇಖವಾಗಿದೆ. ಆದರೂ ಶಿಲಾದಿತ್ಯ ವಿರುದ್ಧ ಕೊಲೆಯತ್ನದ FIR ದಾಖಲಿಸಲಾಗಿದೆ. 12 ಗಂಟೆ ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ