Breaking News

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು: ವಾಟಾಳ್ ನಾಗರಾಜ್

Spread the love

ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು ಬಂದ್ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಮುಂದಿನ ತಿಂಗಳು ಎರಡನೇ ಹಂತದ ಚಳವಳಿ ಆರಂಭಿಸಲಾಗುತ್ತಿದ್ದು ಜನವರಿ 9 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು, ರಾಜ್ಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹಾಗು ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗಿರುವ ರೈಲು ಹಳಿಗಳ ಮೇಲೆ ಕುಳಿತು ಸತ್ಯಗ್ರಹ ನಡೆಸಿ ರೈಲು ತಡೆ ನಡೆಸಲಾಗುವುದು ಎಂದರು.  

ರಾಜ್ಯಾದ್ಯಂತ ಈಗಾಗಲೇ  ಎರಡು ಸಾವಿರ ಕನ್ನಡಪರ ಸಂಘಟನೆಗಳು ಈ  ಪ್ರತಿಭಟನೆಗೆ   ಬೆಂಬಲ ನೀಡುತ್ತಿವೆ ಎಂದು ತಿಳಿಸಿದ್ದಾರೆ. ಅಂದು ಪ್ರಯಾಣಿಕರು ರೈಲು ನಿಲ್ದಾಣದ ಕಡೆ ಬರಬಾರದು ಎಂದು ಅವರು ಮನವಿ ಮಾಡಿದರು. ಇದು ಕನ್ನಡಿಗರ ಉಳಿವಿನ ಪ್ರಶ್ನೆಯಾಗಿದ್ದು, ನಮ್ಮ ಹೋರಾಟ ಯಾವುದೇ ಕಾರಣಕ್ಕು ನಿಲ್ಲುವುದಿಲ್ಲ ಎಂದು ವಾಟಾಳ್ ಹೇಳಿದರು


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ