Breaking News

ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ…

Spread the love

ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ…
ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ; ಸಿಎಂ ಸಿದ್ಧರಾಮಯ್ಯ
ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ…
ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ
ಏನೇ ಕ್ರಮಕೈಗೊಂಡರೂ ಹೋದ ಜೀವಗಳು ಮರಳಿ ಬರಲಿವೇಯೇ??
ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ
‘ಪಾಕಿಸ್ತಾನದ ಜೊತೆ ಯುದ್ದದ ಅನಿವಾರ್ಯತೆ ಇಲ್ಲ, ನಾವು ಶಾಂತಿಯ ಪರವಾಗಿ ಇರುವವರು, ಆದರೆ ಪೆಹಲ್’ಗಾಮ್ ಉಗ್ರದ ದಾಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ ಎಂದು ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ‘ಕಾಶ್ಮೀರದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ. ಭದ್ರತೆ ಇದೆ ಎಂದು ನಂಬಿಕೊಂಡು ಜನ ಕಾಶ್ಮೀರಕ್ಕೆ ಹೋದರು.ಆದರೆ ಅಲ್ಲಿ ಭದ್ರತೆ ವೈಫಲ್ಯ ಉಂಟಾಗಿದೆ. ಹಾಗಾದರೆ ಇವರು ಮಾಡಿದ್ದು ಬರಿ ಭಾಷಣನಾ. ಈಗ ಏನೇ ಕ್ರಮಕೈಗೊಂಡರು ಹೋದ 26 ಜೀವ ವಾಪಸ್ ತರಲು ಸಾಧ್ಯನಾ. ಪುಲ್ವಾಮ ಘಟನೆ ವಿಚಾರದಲ್ಲಿ ಮುಂದೆ ಏನಾಯಿತು, ಯಾರಿಗೆ ಗೊತ್ತಿದೆ ಹೇಳಿ. ಈಗ ಕೇಂದ್ರ ಸರ್ಕಾರ ಭದ್ರತಾ ವೈಫಲ್ಯ ಒಪ್ಪಿಕೊಂಡಿದೆ. ನಾನು ಮೊದಲೇ ಹೇಳಿದೆ, ನನ್ನ ಮಾತು ನಿಜವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿರುವ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ವಿಚಾರವಾಗಿ ಮಾತನಾಡಿದ ಸಿಎಂ ‘ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ. ರಾಜ್ಯದಲ್ಲಿ ಎಷ್ಟು ಜನ ಪಾಕಿಸ್ತಾನ ಪ್ರಜೆಗಳು ಇದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಕೇಂದ್ರದ ಸೂಚನೆಯನ್ನ ನಾವು ಪಾಲಿಸುತ್ತೇವೆ‌. ಬೆಂಗಳೂರಿನಲ್ಲಿ ಅತಿ ಹೆಚ್ಚು ಜನರು ಇರುವ ಸಾಧ್ಯತೆ ಇದೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇವೆ‌ ಎಂದು ಹೇಳಿದರು. ಬೈಟ್
ಇನ್ನು ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ. ನಾವು ಯಾವತ್ತು ಯುದ್ಧದ ಪರ ಇಲ್ಲ. ಯುದ್ಧದ ಬದಲು ಭದ್ರತೆಯನ್ನ ಬಿಗಿ ಮಾಡಿಕೊಳ್ಳಬೇಕಿದೆ. ನಾವು ಯಾವತ್ತು ಶಾಂತಿಯ ಪರವಾಗಿದ್ದೇವೆ. ಯುದ್ಧದ ಬಗ್ಗೆ ಯೋಚನೆ ಬೇಡ, ಕೇಂದ್ರ ಸರ್ಕಾರ ಭದ್ರತೆಯನ್ನ ಬಿಗಿ ಮಾಡಿಬೇಕು ಎಂದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ