Breaking News

ಏಳುವರೆ ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಆರೋಪ

Spread the love

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದಿತ್ತು ಬಾಲಕಿ ಕೊಲೆ: ಆಟವಾಡುತ್ತಿದ್ದ ಬಾಲಕಿಗೆ ಸಿಹಿ ತಿನಿಸು ಕೊಡಿಸುವುದಾಗಿ ನಂಬಿಸಿ ಕರೆದೊಯ್ದ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಬಳಿಕ ವಶಕ್ಕೆ ಪಡೆಯಲಾದ ಆರೋಪಿಯನ್ನು ಘಟನಾ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಪೊಲೀಸರು ಗುಂಡು ಹಾರಿಸಿದ್ದು, ತೀವ್ರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದ. ಆತ ಬಿಹಾರ ಮೂಲದ ರಿತೇಶಕುಮಾರ (35) ಎಂಬುದು ಪೊಲೀಸ್​ ತನಿಖೆಯಲ್ಲಿ ಗೊತ್ತಾಗಿತ್ತು. ಕಾಮುಕನ ಅಮಾನುಷ ಕೃತ್ಯಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ