Breaking News

ಮಾಜಿ ಸಂಸದ ಡಿ.ಕೆ.ಸುರೇಶ್  (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ (Aishwarya gowda) ಪ್ರಕರಣದಲ್ಲಿ ಇಡಿ ತನಿಖೆ ಚುರುಕುಗೊಳಿಸಿದ್ದಾರೆ.

Spread the love

ಬೆಂಗಳೂರು, (ಏಪ್ರಿಲ್ 27): ಮಾಜಿ ಸಂಸದ ಡಿ.ಕೆ.ಸುರೇಶ್  (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ (Aishwarya gowda) ಪ್ರಕರಣದಲ್ಲಿ ಇಡಿ ತನಿಖೆ ಚುರುಕುಗೊಳಿಸಿದ್ದಾರೆ.

ಇಡಿ (Enforcement Directorate) ಅಧಿಕಾರಿಗಳು ಐಶ್ವರ್ಯಾ ಗೌಡ, ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಹಾಗೂ ಶಿಲ್ಪಾಗೌಡ ನಿವಾಸ ಸೇರಿ 14 ಕಡೆ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದಾರೆ.

ಅಲ್ಲದೆ ಶಾಸಕ ವಿನಯ್ ಕುಲಕರ್ಣಿ, ಐಶ್ವರ್ಯಾಗೌಡ ನಂಟಿನ ರಹಸ್ಯ ಬಯಲಾಗಿದ್ದು, ಇಬ್ಬರೂ ಕೋಟ್ಯಂತರ ರೂ. ವ್ಯವಹಾರ ಮಾಡಿವುದು ತನಿಖೆ ವೇಳೆ ಸ್ಫೋಟಕ ವಿಚಾರಗಳು ಬಹಿರಂಗವಾಗಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಹಾಯ ಮಾಡಿದ್ದ ಐಶ್ವರ್ಯಾ, ವಿನಯ್ ಕುಲರ್ಣಿ ಬಳಿ 24 ಕೋಟಿ ರೂ. ಸಾಲದ ರೂಪದಲ್ಲಿ ಪಡೆದಿದ್ದು, ದಿನಕ್ಕೆ 24 ಲಕ್ಷ ರೂ. ಬಡ್ಡಿ ಕೊಡುವುದಾಗಿ ಹೇಳಿರುವ ಅಂಶ ಬೆಳಕಿಗೆ ಬಂದಿದೆ.ಐಶ್ವರ್ಯಾ ಹಾಗೂ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ನಡುವೆ 24 ಕೋಟಿ ವ್ಯವಹಾರ ನಡೆದಿದ್ದಕ್ಕಾಗಿ ಇಡಿ ಅಧಿಕಾರಿಗಳು ಕುಲಕರ್ಣಿ ಮನೆ ಮೇಲೆ ದಾಳಿ ಮಾಡಿದ್ದು, ಸತತ 26 ಗಂಟೆ ದಾಳಿ ನಡೆಸಿ ಹಲವು ದಾಖಲೆಗಳ ಸಂಗ್ರಹಿಸಿದೆ.

ಯೋಗೇಶ್ ಗೌಡ ಕೊಲೆ ಕೇಸ್​ನಲ್ಲೂ ಶಾಸಕ ವಿನಯ್ ಕುಲರ್ಣಿಗೆ ಸಹಾಯ ಮಾಡಿದ್ದಳು ಎನ್ನುವುದು ಗೊತ್ತಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ