Breaking News

ಪತಿಗೆ ಚಾಕುವಿನಿಂದ ಇರಿದ ಪತ್ನಿ

Spread the love

ವಿಜಯಪುರ, ಏಪ್ರಿಲ್​ 27: ನಿವೃತ್ತ ಡಿಜಿಪಿ ಓಂಪ್ರಕಾಶ ಅವರನ್ನು ಅವರ ಪತ್ನಿಯೇ (wife) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಸುದ್ದಿ ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆ ಅದೇ ಮಾದರಿಯಲ್ಲಿ ವಿಜಯಪುರ ನಗರದಲ್ಲಿ ಪತ್ನಿಯೇ ಪತಿ (husband) ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ.

ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್​​ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?

ಇನ್ನು ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್​ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.ಇತರರೊಂದಿಗೆ ಮೊಬೈಲ್​ನಲ್ಲಿ ಚಾಟ್ ಮಾಡುತ್ತಾ ಕಾಲ ಕಳೆಯುತ್ತಿದ್ದ ಪತ್ನಿಯ ನಡೆ ಅಜೀತ್ ರಾಠೋಡ್​ಗೆ ಸರಿ ಬರುತ್ತಿರಲಿಲ್ಲಾ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅಜೀತ್ ಕೊಲೆಗೆ ತೇಜು ಯತ್ನಿಸಿದ್ದಾಳೆ. ಸದ್ಯ ಸ್ಥಳಕ್ಕೆ ಡಿವೈಎಸ್​ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ