Breaking News

ಜನಿವಾರ, ಮಾಂಗಲ್ಯ ತೆಗೆಯಿಸದೇ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅನುವು : ಕೇಂದ್ರ ಸಚಿವ ವಿ ಸೋಮಣ್ಣ

Spread the love

ಜನಿವಾರ, ಮಾಂಗಲ್ಯ ತೆಗೆಯಿಸದೇ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅನುವು : ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು : ದಿನಾಂಕ ಇಂದು (28), 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿವೆ ಎಂದು ಬರೆದಿದ್ದಾರೆ.

ಈ ಬಗ್ಗೆ ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ ಎಂದು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಎಂದು ಸಚಿವ ಸೋಮಣ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ