Breaking News

ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್

Spread the love

ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು ಚರ್ಚಿಸಿದ ಅವರು, ಪೋಷಕರು ತಮ್ಮ ಮಕ್ಕಳನ್ನು ತಮ್ಮ ಮಕ್ಕಳು ಓದಿದ ಶಾಲೆ ಇಲ್ಲವೇ ತಮಗೆ ಅನುಕೂಲವಾದ ಶಾಲೆಗಳಲ್ಲಿ ಮರು ದಾಖಲಾತಿಗೊಳಿಸಲು ಕ್ರಮ ವಹಿಸಬೇಕು ಎಂದಿದ್ದಾರೆ.ಕೋವಿಡ್ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ತರಗತಿಗೆ ದಾಖಲಾತಿ ಮಾಡದೇ ಇರುವುದು ಪರಿಹಾರವಾಗುವುದಿಲ್ಲ. ಇದು ಮಕ್ಕಳ ಹಕ್ಕಿನ ಕಸಿತವೂ ಆಗುತ್ತದೆ. ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ ಎರಡು ಬಾರಿ ಸಮಯ ವಿಸ್ತರಿಸಲಾಗಿತ್ತು. ಆದರೂ ಕೆಲ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ತರಗತಿಗಳಿಗೆ ಇನ್ನೂ ಮರು ದಾಖಲಾತಿ ಮಾಡದಿರುವುದಕ್ಕೆ ಕೋವಿಡ್ ಸಾಂಕ್ರಾಮಿಕ ಒಂದು ನೆಪವಾಗಬಾರದು ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ