ಹುಬ್ಬಳ್ಳಿ, ಏಪ್ರಿಲ್ 29: ಬಸವ ಜಯಂತಿ, ಕಾರ್ಮಿಕರ ದಿನಾಚರಣೆ ರಜೆ ಹಾಗೂ ವಾರಾಂತ್ಯದ ರಜೆಗಳ (Weekend Holidays) ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ಗಳ ಸೇವೆ (NWKRTC Special Buses) ಕಲ್ಪಿಸಲು ಮುಂದಾಗಿದೆ. ಈ ವಿಚಾರವಾಗಿ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಹೆಚ್ಚುವರಿ ಬಸ್ ಸಂಚಾರದ ಮಾಹಿತಿ ನೀಡಿದೆ. ಬೆಂಗಳೂರು (Bengalru) ಹಾಗೂ ಇತರ ಪ್ರಮುಖ ಸ್ಥಳಗಳಿಂದ ವಿಶೇಷ ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.
30 ರಂದು ಬುಧವಾರ ಬಸವ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರದ ವತಿಯಿಂದ ರಜೆ ಘೋಷಿಸಲಾಗಿದೆ. ಮೇ 1 ರಂದು ಗುರುವಾರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜೆ ಇದೆ. ಶುಕ್ರವಾರ ಒಂದು ದಿನ ಕಳೆದರೆ ಶನಿವಾರ ಹಾಗೂ ಭಾನುವಾರ ವಾರಾಂತ್ಯದ ರಜೆಗಳಿವೆ. ಹೀಗಾಗಿ ಸಾಲು ರಜೆಗಳ ಕಾರಣ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಲಿದೆ.
ವಿಶೇಷ ಬಸ್ಗಳ ಕಾರ್ಯಾಚರಣೆ ಎಲ್ಲೆಲ್ಲ?
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಇತರೇ ಪ್ರಮುಖ ಸ್ಥಳಗಳು / ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ಗಳು ಕಾರ್ಯಾಚರಿಸಲಿವೆ. ಅದರಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು ಹಾಗೂ ಇತರೆ ಪ್ರಮುಖ ಸ್ಥಳಗಳಿಗೆ ಹೋಗಲು ದಿನಾಂಕ:01-05-2025, 04-05-2025 ಹಾಗೂ 05-05-2025 ರಂದು ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸ್ಥೆ ಮನವಿ ಮಾಡಿದೆ.ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಿ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.
Laxmi News 24×7