Breaking News

ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ;

Spread the love

ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಅರುಣ್ ಕುಮಾರ್ ಮತ್ತು ಪುಷ್ಪ ಅವರು ‘ಪಿಎ’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಪೃಥ್ವಿ ಅಂಬಾರ್ ನಟಿಸುವ ಮೊದಲ ಸಿನಿಮಾಗೆ ಇವರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಬಾಲಿವುಡ್‌ನ ‘ರಾಮಾಯಣ’ ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗ ಅವರ ಕುಟುಂಬದವರೂ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ ನಿರ್ಮಾಪಕ ಕೂಡ ಹೌದು. ಬಾಲಿವುಡ್​ನ ‘ರಾಮಾಯಣ’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗುವ ಹಂತಕ್ಕೆ ಅವರು ಬೆಳೆದಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡುತ್ತಾ ಇದ್ದಾರೆ. ಈಗ ಅವರ ಕುಟುಂಬದವರು ಕೂಡ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ

ಯಶ್ ಬಳಿಕ ಅವರ ತಾಯಿ ಪುಷ್ಪ ಅವರು ಹಲವು ಸಿನಿಮಾಗಳನ್ನು ತಯಾರು ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ. ಸ್ಯಾಂಡಲ್​ವುಡ್​ನಲ್ಲಿ ಪಿಎ (PA) ಅನ್ನೋ ಬ್ಯಾನರ್ ಹುಟ್ಟಿಕೊಂಡಿದೆ. ಸಿನಿಮಾ ನಿರ್ಮಾಣಕ್ಕಾಗಿ ಹುಟ್ಟಿಕೊಂಡ ಹೊಸ ಬ್ಯಾನರ್ ಇದಾಗಿದೆ. ಈ ಬ್ಯಾನರ್ ವಿಸ್ತೃತ ರೂಪದ ಬಗ್ಗೆ ಕುತೂಹಲ ಮೂಡಿದೆ.

ಪಿಎ ಎಂದರೆ ಪುಷ್ಪ ಹಾಗೆ ಅರುಣ್ ಕುಮಾರ್ ಎನ್ನುವ ಮಾಹಿತಿ ಇದೆ. ಇದು ಯಶ್ ತಂದೆ-ತಾಯಿ ಹೆಸರು. ಈ ಕಾರಣದಿಂದಲೇ ಬ್ಯಾನರ್​ಗೆ ‘ಪಿಎ’ ಎಂದು ಇಡಲಾಗಿದೆ ಎನ್ನಲಾಗುತ್ತಿದೆ. ಪೃಥ್ವಿ ಅಂಬಾರ್ ನಾಯಕನಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಯಶ್ ತಾಯಿ ನಿರ್ಮಾಣ ಸಂಸ್ಥೆ ಬಗ್ಗೆ ಸದ್ಯದಲ್ಲಿಯೇ ಅಧಿಕೃತ ಮಾಹಿತಿ ಹೊರಬೀಳಲಿದೆ.

 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ