Home / ಜಿಲ್ಲೆ / ಬೆಳಗಾವಿ / ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆ

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದ್ದಾರೆ.

ಬೆಳಗಾವಿಯ ಯಳ್ಳೂರು ಗ್ರಾಮದ ಹದ್ದಿಯಲ್ಲಿರುವ 40 ಎಕರೆ ಸರ್ಕಾರಿ ಜಾಗದಲ್ಲಿ ಸುಧಾರಿತ ಶೈಲಿಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಶಾಸಕ ಅಭಯ ಪಾಟಲ ಇಂದು ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ ಜೊತೆಗೆ ಯಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಜಾಗ ಪರಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಅಭಯ ಪಾಟೀಲ, ಬೆಳಗಾವಿ ನಗರ ಫೌಂಡ್ರಿ ಉದ್ಯಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಂತೆ ಕ್ರೀಡಾರಂಗದಲ್ಲೂ ಬೆಳಗಾವಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ಸಂಕಲ್ಪ ಮಾಡಿದ್ದೇನೆ, ಬೆಳಗಾವಿ ಪಕ್ಕದ ಯಳ್ಳೂರ ಗ್ರಾಮದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಹಲವಾರು ಬಾರಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆದಿದ್ದೇನೆ ಎಂದರು.

ಉತ್ತರ ಕರ್ನಾಟಕ ಭಾಗದಲ್ಲಿ ಬಹಳಷ್ಟು ಜನ ಅಥ್ಲೆಟಿಕ್, ಕ್ರೀಡಾಪಟುಗಳಿದ್ದು, ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾದರೆ, ಕ್ರಿಕೆಟ್ ಹೊರತುಪಡಿಸಿ, ಟೆನಿಸ್ ಪುಟ್ ಬಾಲ್, ವ್ಹಾಲಿಬಾಲ್, ಜಿಮ್ನ್ಯಾಸ್ಟಿಕ್ ಸೇರಿದಂತೆ ಎಲ್ಲ ಕ್ರೀಡೆಗಳನ್ನು ಒಂದೇ ಸೂರಿನ ಕೆಳಗೆ ಅಡುವದರ ಜೊತೆಗೆ ತರಬೇತಿ ಮತ್ತು ಮಾರ್ಗದರ್ಶನ ಸಿಗಲಿದೆ ಇದರಿಂದ ಬೆಳಗಾವಿ ಆರ್ಥಿಕವಾಗಿಯೂ ಬೆಳೆಯಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಭಾರತದಲ್ಲೇ ಇಂತಹ ಒಳಾಂಗಣ ಕ್ರೀಡಾಂಗಣ ಇಲ್ಲ, ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಆಗುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ ಎಂದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ