Breaking News

ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

Spread the love

ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ ಸ್ಥಿತಿಗತಿಗಳನ್ನು ಅರಿಯಲು ಅವರಿಗೆ ಯೋಜನೆಗಳನ್ನು ರೂಪಿಸಿ ಮುಖ್ಯ ವಾಹನಿಗೆ ತರಲು ತುಂಬಾ ಅನುಕೂಲವಾಗಲಿದೆ ಎಂದರು.

ಡಾ. ಬಿ.ಆರ್‌. ಅಂಬೇಡ್ಕರ್ ಅವರ ಸಿದ್ಧಾಂತ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜಾತಿಗಣತಿಗೆ ಮುಂದಾಗಿರುವ ನಿರ್ಧಾರವು ಎನ್.ಡಿ.ಎ ಸರ್ಕಾರ ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಮಾನ್ಯ ಪ್ರಧಾನ ಮಂತ್ರಿ ಗಳಿಗೆ ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ