Breaking News

ಎಸ್ಎಸ್ಎಲ್​ಸಿ ಫಲಿತಾಂಶ ಬಾಲಕಿಯರದ್ದೇ ಮೇಲುಗೈ

Spread the love

ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ 25ನೇ ಸ್ಥಾನ ಗಳಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೇ ರಾಜ್ಯಕ್ಕೆ ಓರ್ವ ವಿದ್ಯಾರ್ಥಿನಿ ಪ್ರಥಮ ಸ್ಥಾನ ಗಳಿಸಿದರೆ, ಮೂವರು ವಿದ್ಯಾರ್ಥಿಗಳು ಎರಡನೇ ಸ್ಥಾನ ಗಳಿಸಿದರೆ, ನಾಲ್ವರು ಮೂರನೇ ಸ್ಥಾನ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ.62.16ರಷ್ಟು ಫಲಿತಾಂಶ ದಾಖಲಿಸಿದ್ದು, ಈ ಮೂಲಕ ರಾಜ್ಯಕ್ಕೆ 25ನೇ ಸ್ಥಾನ ಗಳಿಸಿದೆ. ಕಳೆದ ಬಾರಿ 29ನೇ ಸ್ಥಾನ ಸಿಕ್ಕಿತ್ತು. ಒಟ್ಟು 31,771 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 19584 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇದರಲ್ಲಿ 7,861 ಬಾಲಕರು, 11,723 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಒಟ್ಟು 12,187 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

ಬಾಲಕಿಯರ ಮೇಲುಗೈ: ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದರೆ, ಖಾನಾಪುರ ತಾಲ್ಲೂಕಿನ ನಂದಗಡ ಸಂಗೊಳ್ಳಿ ರಾಯಣ್ಣ ಸ್ಮಾರಕ ವಸತಿ ಶಾಲೆಯ‌ ವಿದ್ಯಾರ್ಥಿನಿ ರೋಹಿಣಿ ಸಿದ್ದಪ್ಪ ಪಾಟೋಳಿ, ಬೆಳಗಾವಿ ನಗರದ ಸೆಂಟ್ ಜೋಸೆಫ್ ಕಾನ್ವೆಂಟ್ ಹೈಸ್ಕೂಲ್ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿಯರಾದ ನಿಧಿ ನಂದಕುಮಾರ್​ ಕಂಗ್ರಾಳ್ಕರ್, ನೀಲಾಂಬಿಕಾ ಶಿವಾನಂದ ಬುಬನಾಳೆ 624 ಅಂಕ ಪಡೆದು ರಾಜ್ಯಕ್ಕೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಅದೇ ರೀತಿ, ಬೆಳಗಾವಿ ಮಹಿಳಾ ವಿದ್ಯಾಲಯ ಮಂಡಳ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಅನ್ವಿತಾ ಅಭಿಜಿತ ತಳಗೇರಿ, ಬೈಲಹೊಂಗಲ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತಿ ಮಲ್ಲಿಕಾರ್ಜುನ್​ ಬಿರಾದರ, ಬೈಲಹೊಂಗಲ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪದ್ಮಾವತಿ ಸುರೇಶ ನಜ್ಜರದ, ಬೆಳಗಾವಿ ಕೆಎಲ್ಎಸ್ ಆಂಗ್ಲ ಮಾಧ್ಯಮ ಶಾಲೆ ಸಮೃದ್ಧಿ ಸತೀಶ ಮೂಳ್ಯಾ 623 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾರೆ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ