Breaking News

ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ: ಆದರೆ, ತೆರಿಗೆ ಸಂಗ್ರಹ ಗುರಿ ಮುಟ್ಟಲೇಬೇಕು – ಸಿಎಂ

Spread the love

ಬೆಂಗಳೂರು: ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಶನಿವಾರ ಬ್ಯಾಂಕ್ವೆಂಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಅವರು, ವೇತನ‌ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೇ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ. ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ರಾಜ್ಯಗಳಿಗೆ ವಾಪಸ್ ಕೊಡಬೇಕೆಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ. ನಮಗೆ 11,495 ಕೋಟಿ ರೂಪಾಯಿ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ