Breaking News

ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.

ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಲ್ಲಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಂದಿನ ತನಿಖೆಯನ್ನು ಬೆಳಗಾವಿ ಎಸಿಎಫ್‌ಗೆ ವಹಿಸಲಾಗಿದೆ ಎಂದು ದಳದ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ