ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು.
ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ ಹೆದರಿಕೊಂಡು ಮೋದಿ ಅವರು ಅನುಮತಿ ಕೊಡಿಸ್ತಿಲ್ಲಾ. ಪ್ರಲ್ಹಾದ್ ಜೋಶಿ ಆ ಬಗ್ಗೆ ಪ್ರಧಾನಿ ಮೋದಿ ಮುಂದೆ ಮಾತಾಡ್ತಿಲ್ಲಾ. ನಾವು ಅನೇಕ ಸಲ ಕೇಂದ್ರಕ್ಕೆ ಹೋಗಿ ಮನವಿ ಮಾಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಹಿನ್ನೆಲೆ ಮೇ 20ಕ್ಕೆ ವಿಜಯನಗರ ದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.
Laxmi News 24×7