Breaking News

ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ

Spread the love

ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ.

ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿ ಹಿಂಭಾಗ ಸ್ಪರ್ಶಿಸಿ ಹೋಗಿದ್ದ. ಕೆಲವೇ ನಿಮಿಷಗಳಲ್ಲಿ ಪುನಃ ಹಿಂದಿನಿಂದ ಬಂದು ಮತ್ತದೇ ರೀತಿಯ ಅನುಚಿತ ವರ್ತನೆ ತೋರಿದ್ದಾನೆ. ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಕೆಲವರ ಸಹಾಯ ಕೇಳಿದರೂ ಯಾರೂ ನೆರವಿಗೆ ಬರಲಿಲ್ಲ ಎಂದು ನೊಂದ ಯುವತಿ ದೂರಿನಲ್ಲಿ ಆರೋಪಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಡಾ.ಶಿವಕುಮಾರ್ ಗುಣಾರೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ