Breaking News

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

Spread the love

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ
ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ
May be an image of 5 people, people studying and text
ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು.
May be an image of 3 people, people studying and text
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ(ಮೇ 5) ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ
May be an image of 5 people, people studying and text
ಅನುಷ್ಠಾನಗೊಳಿಸಲಾಗಿರುತ್ತದೆ. ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಬಹುಜನರ ಜೀವನಮಟ್ಟ ಸುಧಾರಣೆಗೆ ಇದರಿಂದ ಅನುಕೂಲವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ