Breaking News

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ: ಈ ಸೌಲಭ್ಯ ಪಡೆಯುವುದು ಹೇಗೆ?

Spread the love

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆ ಇದೆ.

2018 ರ ಮಾರ್ಚ್ ನಿಂದ ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಾ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿತ್ತು. ನಂತರ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಎರಡೂ ಯೋಜನೆಗಳ ಉದ್ದೇಶ ಮತ್ತು ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ‘ ಎಂಬ ಯೋಜನೆ ರಾಜ್ಯದಲ್ಲಿ ಅನುಷ್ಠಾನವಾಗಿತ್ತು.

ದೇಶದಲ್ಲಿ ಕೋಟ್ಯಂತರ ಜನರಿಗೆ, ವಿಶೇಷವಾಗಿ ಕಡಿಮೆ ಆದಾಯದ ಕುಟುಂಬಗಳಿಗೆ, ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಲು ಈ ಯೋಜನೆ ನೆರವಾಗಿದೆ. ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ (ಎನ್ ಎಸ್‌ಎಸ್‌ಒ) ಇತ್ತೀಚಿನ ಸಂಶೋಧನೆಗಳ ಪ್ರಕಾರ, ಭಾರತದಲ್ಲಿ ಆರೋಗ್ಯ ವ್ಯವಸ್ಥೆಯು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಶೇ. 86 ಗ್ರಾಮೀಣ ಪ್ರದೇಶದ ಜನರು ಹಾಗೂ ಶೇ. 82 ನಗರ ಪ್ರದೇಶದ ಜನರು ಆರೋಗ್ಯ ವಿಮೆ ಹೊಂದಿಲ್ಲ. ಇದರ ಪರಿಣಾಮ ಅನಿರೀಕ್ಷಿತ ಘಟನೆ ಹಾಗೂ ದೀರ್ಘಕಾಲೀನ ಆರೋಗ್ಯ ಸಮಸ್ಯೆಯಿಂದ ಈ ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತವೆ. ಇದಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ ಆರಂಭವಾದ ಸಾರ್ವತ್ರಿಕ ಆರೋಗ್ಯ ವಿಮಾ ವ್ಯವಸ್ಥೆಯೇ ಈ ಆಯುಷ್ಮಾನ್ ಭಾರತ್ ಯೋಜನೆ. ರಾಜ್ಯದಲ್ಲಿ ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಗೂ ಉತ್ತಮ ಸ್ಪಂದನೆ ಸಿಕ್ಕಿದೆ ಎನ್ನುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.

ಅರ್ಹತೆ ಹಾಗೂ ಚಿಕಿತ್ಸಾ ಮೊತ್ತ : ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಾಗಲಿದೆ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಮಿತಿ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ಎನ್ನುತ್ತಾರೆ ಅಧಿಕಾರಿಗಳು.

ಚಿಕಿತ್ಸೆಗಳು : ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಈ ಯೋಜನೆಯಡಿ ಲಭ್ಯ ಇವೆ.

169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ ಎಂಬ ವಿವರ ಇಲ್ಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ