Breaking News

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ

Spread the love

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ
ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ
ಬೆಳಗಾವಿ ಜಿಲ್ಲೆಗೆ ಮಂಜೂರಾದ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಉದ್ಧೇಶದಿಂದ ಇಂದು ಸಂಸದ ಜಗದೀಶ ಶೆಟ್ಟರ್ ಅವರು ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯನ್ನು ನಡೆಸಿದರು.
ಮಂಗಳವಾರದಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಬೆಳಗಾವಿಯ ಸಂಸದರಾದ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ನೇತೃತ್ವದಲ್ಲಿ ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯನ್ನು ನಡೆಸಿದರು.
ಸಂಸದ ಜಗದೀಶ್ ಶೆಟ್ಟರ್ ಅವರ ಪ್ರಯತ್ನದಿಂದ ಬೆಳಗಾವಿ ನಗರದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳು ಜಾರಿಗೊಂಡಿವೆ.
ಹಲವಾರು ಯೋಜನೆಗಳು ಈಗಾಗಲೇ ಆರಂಭಗೊಂಡಿದ್ದು, ಸಂಸದರು ಸಂಬಂಧಿಸಿದ ಅಧಿಕಾರಿಗಳಿಂದ ಪ್ರಗತಿಯನ್ನು ಪರಿಶೀಲಿಸಿ ಮಾಹಿತಿಯನ್ನು ಪಡೆದುಕೊಂಡರು.
ಧಾರವಾಡ ಮತ್ತು ಬೆಳಗಾವಿ ಹೊಸ ರೇಲ್ವೆ ಲೈನ್’ಗೆ ಟೆಂಡರ್ ಪ್ರಕ್ರಿಯೆ, ಶೀಘ್ರದಲ್ಲೇ ಕರೆಯುವುದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತು ಚರ್ಚಿಸಿ, ಶೀಘ್ರದಲ್ಲೇ ಮುಂದಿನ ಮಳೆಗಾಲ ಆರಂಭವಾಗುವ ಮೊದಲೇ ಪೂರ್ಣಗೊಳಿಸಲು ಸಲಹೆ ಸೂಚನೆಗಳನ್ನುನೀಡಿದರು. ಅದೇ ರೀತಿ ನಗರದ ಮೇಲ್ಸೇತುವೆಗಳ ನಿರ್ಮಾಣ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಮತ್ತು ಲೋಕೋಪಯೋಗಿ ಇಲಾಖೆ ರೇಲ್ವೆ ಮಂಡಳಕ್ಕೆ ಸಹಕಾರ ನೀಡಬೇಕೆಂದರು.
ಈ ವೇಳೆ ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ವರಿಷ್ಠ ಅಧಿಕಾರಿಗಳು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ