Breaking News

ಕಾರಿನ ಟೈರ್​ ಸ್ಫೋಟಗೊಂಡು ಭೀಕರ ರಸ್ತೆ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Spread the love

ಹಾವೇರಿ: ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್ ಬ್ಲಾಸ್ಟ್​ ಆದ ಪರಿಣಾಮ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತನನ್ನು 46 ವರ್ಷದ ಕುರಿಯನ್ ಚಾಕೊ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಾಮಿಯಲ್ ಚಾಕೊ, ಜುನಾತನ್ ಫ್ರಾನ್ಸ್ ಎಂದು ಗುರುತಿಸಲಾಗಿದೆ.

ಮೃತ ಕುರಿಯನ್ ಚಾಕೊ ಮತ್ತು ಗಾಯಾಳುಗಳು ಕೇರಳದ ಕಣ್ಣೂರು ಮೂಲದ ನಿವಾಸಿಗಳು ಎಂದು ಗೊತ್ತಾಗಿದೆ. ಮುಂಬೈನಿಂದ ಮುಂಬೈನಿಂದ ಬೆಂಗಳೂರು ಕಡೆಗೆ ಹೊರಟಿದ್ದ ವೇಳೆ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ​ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ