Breaking News
Home / ಜಿಲ್ಲೆ / ಬೆಂಗಳೂರು / ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ

Spread the love

ಬೆಂಗಳೂರು, – ಕೊರೊನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ. ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 , ವಿಪತ್ತು ನಿರ್ವಹಣೆ ಕಾಯ್ದೆ 2005ರ ಅಡಿಯಲ್ಲಿ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಬಾರ್, ರೆಸ್ಟೋರೆಂಟ್, ಹೋಟೆಲ್‍ಗಳಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾಧಾರಣವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು. 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಬಹುದು. ಸಾಧಾರಣ ಆಚರಣೆಗೂ ಮುಂಚಿತವಾಗಿ ಆನ್‍ಲೈನ್‍ನಲ್ಲಿ ಪಾಸ್ ಪಡೆಯಬೇಕು. ಈ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು ಆರೋಗ್ಯ ಸೇತು ಆ್ಯಪ್ ಕಡ್ಡಾಯ.

ಪಬ್ ಮತ್ತು ಕ್ಲಬ್‍ಗಳಲ್ಲಿ ಶೇ.50ರಷ್ಟು ಜನರು ಮಾತ್ರ ಸೇರಬೇಕು. ಪಬ್‍ಗಳಲ್ಲಿ ಡ್ಯಾನ್ಸ್ ಮತ್ತು ಡಿಜೆ ಸೌಂಡ್ಸ್ ನಿಷೇಧ ಮಾಡಲಾಗಿದೆ. ಕೊರೊನಾ ನಿಯಮಗಳ ಪಾಲನೆ, ಸಾಮಾಜಿಕ ಅಂತರ, ಸ್ಯಾನಿಟೈಸರ್, ಥರ್ಮಲ್‍ಸ್ಕ್ರೀನಿಂಗ್, ನಿಗದಿತ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಂಘಟಕರು ಹೆಚ್ಚು ನಿಗಾ ವಹಿಸುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ರೂಪಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ