Breaking News

ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್

Spread the love

ಬೆಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ (Pahalgam) ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು (Flights Cancelled) ಮಾಡಲಾಗಿದೆ.

ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟ್ವೀಟ್​ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ