Breaking News

ಬಾಗಲಕೋಟೆ: ಲಾರಿ – ಬೈಕ್ ನಡುವೆ ಅಪಘಾತ ; ಮೂವರ ದಾರುಣ ಸಾವು

Spread the love

ಬಾಗಲಕೋಟೆ : ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದಾಗಿ ಮೂವರು ಮೃತಪಟ್ಟಿದ್ದಾರೆ.

ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳು. ಮೃತರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು. ಮೂವರು ಬೈಕ್ ಮೇಲೆ ತೆರಳುವಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಮೃತರೆಲ್ಲರೂ ಮರನಾಳ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ