Breaking News

ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Spread the love

ಹುಬ್ಬಳ್ಳಿ (ಡಿ. 16): ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿಯ ಮುತ್ತುಗೌಡ ಗಂಗನಗೌಡರ ಎಂಬುವವರ ಜಮೀನು ಕುಂದಗೋಳದ ಬೆಳ್ಳಿಗಟ್ಟಿ ಬಳಿ ಇದೆ‌. ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರದವರು ಜಮೀನನ್ನು ವಶಕ್ಕೆ ಪಡೆದಿದ್ದಾರೆ. ಜಮೀನು ಸ್ವಾಧೀನ ಪಡಿಸಿಕೊಂಡ ನಂತರ ಅದರಲ್ಲಿ ಎಷ್ಟು ಮರಗಳಿದ್ದವು ಎಂಬ ಮಾಹಿತಿಯನ್ನ ತೋಟಗಾರಿಕೆ ಇಲಾಖೆಯಿಂದ ಪಡೆಯಬೇಕಿತ್ತು. ಮರಗಳ ಮಾಹಿತಿ ನೀಡಿದರೆ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ಹಣವನ್ನು ಕೊಡುತ್ತಿದ್ದರು. ಮಾಹಿತಿ ನೀಡಲು‌ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ ಹಲಕುರ್ಕಿ ಲಂಚದ ಹಣ ಕೇಳಿದ್ದರು.

ಮುತ್ತುಗೌಡನ ಬಳಿ 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ್ದ ಅಧಿಕಾರಿಗೆ ಮೊದಲು 10 ಸಾವಿರ ರೂಪಾಯಿ ಕೊಡಲಾಗಿತ್ತು. ಉಳಿದ 40 ಸಾವಿರ ರೂಪಾಯಿ ಕೊಡುವಾಗ ಎಸಿಬಿ ದಾಳಿ ನಡೆದಿದ್ದು, ಅಧಿಕಾರಿ ಹಣದ ಸಮೇತ ಸಿಕ್ಕು ಬಿದ್ದಿದ್ದಾನೆ. ಎಸಿಬಿ ಡಿಎಸ್ಪಿ ವೇಣುಗೋಪಾಲ, ಇನ್ಸಪೆಕ್ಟರ್‌ಗಳಾದ ಜಾಧವ ಮತ್ತು ಹಿರೇಮಠ ಅವರು ದಾಳಿಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ