ಹೆಬ್ಬಾಳ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ. ಇಬ್ಬರಿಗೆ ಗಂಭೀರವಾದ ಗಾಯ. ಸಹಾಯಕ್ಕೆ ಧಾವಿಸಿದ.ಮಾಜಿ ಶಾಸಕ ಅರವಿಂದ್ ಪಾಟೀಲ್
ಆಂಕರ್ ಖಾನಾಪೂರ-ನಂದಗಡ ಮಾರ್ಗದಲ್ಲಿನ ಹೆಬ್ಬಾಳ ಗ್ರಾಮದ ಬಳಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಯಾಗಿ. ಕಾರಿನಲ್ಲಿದ್ದ ಎಂಟು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ
ಈ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಖಾನಾಪೂರದ ಮಾಜಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಅರವಿಂದ್ ಪಾಟೀಲ್ ಮತ್ತು ಗ್ರಾಮಸ್ಥರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಬೆಳಗಾವಿಗೆ ಕಳುಹಿಸಿದರು.
ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿದೆನೆಂದರೆ ಅಥಣಿಯ ನಿಧಿ ಕುಲಕರ್ಣಿ ಮತ್ತು ಅವರ ಕುಟುಂಬವು ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದು ತಮ್ಮ ಗ್ರಾಮ ಅಥಣಿಗೆ ಹಿಂತಿರುಗುತ್ತಿದ್ದಾಗ ಖಾನಾಪೂರ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಕಾರಿನ ಮುಂಭಾಗವೂ ಛಿದ್ರವಾಗಿತ್ತು. ಕಾರಿನಲ್ಲಿದ್ದ ಇಬ್ಬರ ತಲೆಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಳಗಾವಿಗೆ ಸ್ಥಳಾಂತರಿಸಲಾಗಿದೆ.
ಮಾಜಿ ಶಾಸಕ,ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಅರವಿಂದ್ ಪಾಟೀಲ್ ಅವರು ಈ ಮಾರ್ಗವಾಗಿ ಖಾನಾಪೂರ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಅಪಘಾತವನ್ನು ಕಣ್ಣಾರೆ ಕಂಡು ಹೆಬ್ಬಾಳದ ಗ್ರಾಮಸ್ಥರ ಸಹಾಯದಿಂದ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಂಬ್ಯುಲೆನ್ಸ್‌ನಲ್ಲಿ ಚಿಕಿತ್ಸೆಗಾಗಿ ಕಳುಹಿಸಿದರು.