Breaking News

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಏರಿಕೆ

Spread the love

ಬೆಂಗಳೂರು, ಮೇ 09: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (HK Patil) ಹೇಳಿದರು. ಶುಕ್ರವಾರ (ಮೇ.09) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, 1,500 ಕೋಟಿ ವೆಚ್ಚದ ಸರಗೂರಿನಿಂದ ಹೊಸಪುರಕ್ಕೆ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಂದಾಜು 90 ಕೋಟಿ ರೂ. ವೆಚ್ಚದ ಸತ್ತೇಗಾಲ ಕುಡಿವ ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ರಾಮನಗರ, ಮಾಗಡಿ, ಕುಣಿಗಲ್ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಮೀಕ್ಷೆ ನಡೆಸುವಂತೆ ಸಚಿವರು ಅಭಿಪ್ರಾಯ ನೀಡಿದ್ದಾರೆ. ಮುಂದಿನ ವಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ